ಯುವನಿಧಿ ಬಗ್ಗೆ ಸಂಪೂರ್ಣ ಮಾಹಿತಿ
ಯುವನಿಧಿ ಯೋಜನೆ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು
, 2023ರಲ್ಲಿ ಪದವಿ ಅಥವಾ ಡಿಪ್ಲೋಮಾ ಪೂರೈಸಿದ ನಂತರ 180 ದಿನಗಳವರೆಗೆ ಉದ್ಯೋಗ ಪಡೆಯದ ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ ನೀಡುವ ಉದ್ದೇಶ ಹೊಂದಿದೆ. ಈ ಯೋಜನೆಯಡಿ, ಪದವೀಧರರಿಗೆ ಪ್ರತಿ ತಿಂಗಳು ₹3,000 ಮತ್ತು ಡಿಪ್ಲೋಮಾ ಪಾಸಾದವರಿಗೆ ₹1,500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
ಅರ್ಹತೆಗಳು:
- ಕರ್ನಾಟಕದ ನಿವಾಸಿಯಾಗಿರಬೇಕು.
- ಪದವಿ ಅಥವಾ ಡಿಪ್ಲೋಮಾ ಪೂರೈಸಿರಬೇಕು.
- ತೇರ್ಗಡೆಯಾದ ದಿನಾಂಕದಿಂದ 180 ದಿನಗಳವರೆಗೆ ಉದ್ಯೋಗ ಲಭಿಸದಿರಬೇಕು.
- ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿಲ್ಲದಿರಬೇಕು..
- ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಹೊಂದಿರಬಾರದು.
- ರಾಜ್ಯ ಅಥವಾ ಕೇಂದ್ರ ಸರ್ಕಾರದ ಇತರ ಯೋಜನೆಗಳಡಿ ಅಥವಾ ಬ್ಯಾಂಕ್‌ಗಳಿಂದ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರಬಾರದು.
ಅಗತ್ಯ ದಾಖಲೆಗಳು:
- ಪದವಿ ಅಥವಾ ಡಿಪ್ಲೋಮಾ ಪ್ರಮಾಣಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ಬುಕ್
- ಪಾಸ್‌ಪೋರ್ಟ್ ಗಾತ್ರದ ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ನಿವಾಸ ಪ್ರಮಾಣಪತ್ರ
ಅರ್ಜಿಯ ವಿಧಾನ:
- ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಿ: https://sevasindhu.karnataka.gov.in/Sevasindhu/English
- ಹೊಸ ಬಳಕೆದಾರರಾಗಿ ನೋಂದಣಿ ಮಾಡಿ.
- ಆಧಾರ್ ಸಂಖ್ಯೆ ಮತ್ತು ಇತರ ವಿವರಗಳನ್ನು ನಮೂದಿಸಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಸಲ್ಲಿಸಿದ ಮಾಹಿತಿಯನ್ನು ಪರಿಶೀಲಿಸಿ, ಅರ್ಜಿಯನ್ನು ಸಲ್ಲಿಸಿ.
ಅರ್ಜಿದಾರರು ಪ್ರತಿ ತಿಂಗಳ 1 ರಿಂದ 25ರೊಳಗೆ ತಮ್ಮ ನಿರುದ್ಯೋಗ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಘೋಷಿಸಬೇಕು. ಉದ್ಯೋಗ ದೊರೆತ ನಂತರ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ, ಸೇವಾ ಸಿಂಧು ಪೋರ್ಟಲ್ ಅಥವಾ ಯುವನಿಧಿ ಯೋಜನೆಯ ಅಧಿಕೃತ ವೆಬ್‌ಸೈಟ್‌ಗಳನ್ನು ಭೇಟಿ ಮಾಡಬಹುದು ಅಥವಾ ನಿಮ್ಮ ಹತ್ತಿರ ಇರುವ ಗ್ರಾಮ ಒನ್ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸ ಬಹುದು
No comments:
Post a Comment